ಬೆಂಗಳೂರು: ಸಾಮಾನ್ಯ ಜನರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಿ ಹಣ ಕಸಿಯುತ್ತಿದ್ದ ವಂಚಕರು ಇದೀಗ ರಾಜ್ಯದ ಪ್ರಸಿದ್ಧ ವ್ಯಕ್ತಿಗಳ ಫೋನ್‌ಗಳತ್ತ ಕಣ್ಣು ಹಾಕಿದ್ದಾರೆ. ಕನ್ನಡ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಅವರ ಮೊಬೈಲ್‌ಗಳನ್ನೂ ವಂಚಕರು ಹ್ಯಾಕ್ ಮಾಡಿದ್ದಾರೆ.
ವಂಚಕರು, ಅವರ ಅನೇಕ ಸ್ನೇಹಿತರು ಮತ್ತು ಸಂಬಂಧಿಕರಿಗೆ ತುರ್ತು ಪರಿಸ್ಥಿತಿ ಉಲ್ಲೇಖಿಸಿ ಯುಪಿಐ ಮೂಲಕ ಹಣ ಕಳುಹಿಸುವಂತೆ ಸಂದೇಶಗಳನ್ನು ಕಳುಹಿಸಿದ್ದು, ಒಂದೆರಡು ಗಂಟೆಗಳಲ್ಲಿ ಹಣ ಹಿಂದಿರುಗಿಸುವ ಭರವಸೆ ನೀಡಿದ್ದಾರೆ.
ಕನ್ನಡ ಚಲನಚಿತ್ರ ನಟ ಮತ್ತು ನಿರ್ದೇಶಕ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ, ಬೆಂಗಳೂರಿನ ಸದಾಶಿವನಗರ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಿ ಆರ್ಥಿಕ ಸಹಾಯ ಕೋರಿ ಅವರ ಸಂಪರ್ಕಗಳಿಗೆ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕೆಲವು ಸ್ನೇಹಿತರು ಮತ್ತು ಸಂಬಂಧಿಕರು ತಕ್ಷಣ ದಂಪತಿಗೆ ವಿಷಯ ಮುಟ್ಟಿಸಿದ ಪರಿಣಾಮ, ಪ್ರಕರಣ ಬೆಳಕಿಗೆ ಬಂದು ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.