31 January 2026 | Join group

ಚಿನ್ನಸ್ವಾಮಿ ಕಾಲ್ತುಳಿತ : ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ

  • 07 Jun 2025 12:42:04 PM

ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಚಾಂಪಿಯನ್ ಸಂಭ್ರಮಾಚರಣೆಯ ವೇಳೆ ನಡೆದ ದುರಂತದಲ್ಲಿ 11 ಅಮಾಯಕ ಜೀವಗಳು ಬಲಿಯಾಗಿದ್ದು, ಈ ದುರಂತದ ರೂವಾರಿ ಕರ್ನಾಟಕ ಸರಕಾರ ಎಂದು ಬಿಜೆಪಿ ದಕ್ಷಿಣ ಕನ್ನಡ ಆರೋಪಿಸಿದೆ.

 

ಮಂಗಳೂರಿನ ನಗರದ ಪಿ.ವಿ.ಎಸ್ ವೃತ್ತದ (PVS Circle) ಬಳಿ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಜೂನ್ 06 ರಂದು ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನನಾ ಕಾರ್ಯಕ್ರಮದಲ್ಲಿ ನೆರೆದಿದ್ದ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರ್ ವಿರುದ್ಧ ಹರಿಹಾಯ್ದರು.

 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಮತ್ತು ಅನೇಕ ಬಿಜೆಪಿ ಮುಖಂಡರುಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು ಮತ್ತು ಕಾರ್ಯಕರತರು ಉಪಸ್ಥಿತರಿದ್ದರು.

ಇದನ್ನೂ ಓದಿಸಿಎಂ ನಿವಾಸ ಮತ್ತು ಪಾಸ್ ಪೋರ್ಟ್ ಕಚೇರಿಗೆ ಆತ್ಮಾಹುತಿ ಬಾಂಬ್ ಬೆದರಿಕೆ ಕರೆ