ಬಂಟ್ವಾಳ: ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕೃಷಿಕ ಸಮಾಜದ ನೂತನ ಭವನವನ್ನು ಮಾಜಿ ರಾಜ್ಯ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, “ಸರಕಾರಿ ಸವಲತ್ತುಗಳು ನೇರವಾಗಿ ರೈತರಿಗೆ ತಲುಪುವಂತೆ ಕೃಷಿಕ ಸಮಾಜ ಸೇತುವೆಯಾಗಿ ಕಾರ್ಯನಿರ್ವಹಿಸಿದರೆ, ಕೃಷಿಕರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥ ಗೌಡ ಎಸ್.ಆರ್, ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್ ಇತರರು ಉಪಸ್ಥಿತರಿದ್ದರು.
2024–25ನೇ ಸಾಲಿನಲ್ಲಿ ಭತ್ತದ ಬೆಳೆಯಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ಲೀಲಾ (ಬಂಟ್ವಾಳ) ಹಾಗೂ ಡ್ವಾಲಿ ವಿಜೆ (ಕಾವಳಮೂಡೂರು) ಅವರನ್ನು ಸನ್ಮಾನಿಸಲಾಯಿತು. ಕೃಷಿ ಇಲಾಖೆಯಿಂದ ಸಹಾಯಧನದ ಮೂಲಕ ಸವಲತ್ತುಗಳನ್ನು ಅರ್ಹ ರೈತರಿಗೆ ವಿತರಿಸಲಾಯಿತು.