23 October 2025 | Join group

ಕಡೇಶ್ವಾಲ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 'ಸ್ವಚ್ಚತಾ ಹೀ ಸೇವಾ' ಯೋಜನೆಯಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ

  • 25 Sep 2025 02:18:55 PM

ಕಡೇಶ್ವಾಲ್ಯ: ದಿನಾಂಕ 17-09-2025 ರಿಂದ 02-10-2025 ರವರೆಗೆ ನಡೆಯುತ್ತಿರುವ “ಸ್ವಚ್ಚತಾ ಹೀ ಸೇವಾ” ಅಭಿಯಾನದ ಭಾಗವಾಗಿ, ಇಂದು ಕಡೇಶ್ವಾಲ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತು.

 

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ರಾವ್, ಉಪಾಧ್ಯಕ್ಷ ಶ್ರೀ ಸುರೇಶ್ ಕನ್ನೊಟ್ಟು, ಸದಸ್ಯರು ಶ್ರೀ ಸನತ್ ಕುಮಾರ್ ಆಳ್ವ, ಶ್ರೀಮತಿ ಜಯ ಆರ್. ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಎಚ್‌ಒ, ಮಾತೃ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು, ಆಶಾ ಕಾರ್ಯಕರ್ತೆಯರು, ಶಾಲೆಯ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಅಂಗಡಿ ಮಾಲಕರಾದ ಶ್ರೀ ಮಹಮ್ಮದ್, ವಿ.ಆರ್.ಡಬ್ಲ್ಯೂ., ಗ್ರಂಥಾಲಯ ಮೇಲ್ವಿಚಾರಕಿ, ಪಂಚಾಯತ್ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಭಾಗವಹಿಸಿದರು.

ಈ ಕಾರ್ಯಕ್ರಮದ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಶುದ್ಧತೆ ಮತ್ತು ಸಾರ್ವಜನಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಲಾಯಿತು. ಎಲ್ಲರ ಸಹಭಾಗಿತ್ವದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.