ಮಂಗಳೂರು: ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ನವರಾತ್ರಿಯ ಅಂಗವಾಗಿ ಭಕ್ತಿಪೂರ್ಣ ವಾತಾವರಣದಲ್ಲಿ ಮಹೋತ್ಸವ ನಡೆಯುತ್ತಿದೆ. ಪ್ರತಿದಿನವೂ ದೇವಿಗೆ ವಿಶೇಷ ಪೂಜೆ, ಅಲಂಕಾರ, ಭಜನೆ ಹಾಗೂ ಸಾಂಪ್ರದಾಯಿಕ ಸೇವಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತಾದಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌ ಟ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಮಹೋತ್ಸವದಲ್ಲಿ ಭಾಗವಹಿಸಿದರು. ಅವರು ಭಕ್ತಾದಿಗಳೊಂದಿಗೆ ದೇವರ ದರ್ಶನ ಮಾಡಿ ಪ್ರಸಾದವನ್ನು ಸ್ವೀಕರಿಸಿದರು. ಕ್ಷೇತ್ರದಲ್ಲಿ ಹಬ್ಬದ ಸಂಭ್ರಮ ಆವರಿಸಿಕೊಂಡಿದ್ದು, ಶ್ರದ್ಧೆ ಮತ್ತು ಭಕ್ತಿಯಿಂದ ನವರಾತ್ರಿ ಆಚರಣೆಗಳು ಜರಗುತ್ತಿವೆ