ಕಡೇಶಿವಾಲಯ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಸಾಮೂಹಿಕ ದುರ್ಗಾ ಪೂಜೆ ವೈಭವದಿಂದ ಜರುಗಿತು.
ಸುಮಾರು 300 ಮಂದಿ ಭಕ್ತರು ಪೂಜಾ ಸೇವೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಇದೇ ಸಂದರ್ಭದಲ್ಲಿ 400ಕ್ಕೂ ಹೆಚ್ಚು ಭಕ್ತಾದಿಗಳು ಅನ್ನ ಪ್ರಸಾದವನ್ನು ಸ್ವೀಕರಿಸಿದರು.
ಗ್ರಾಮ ಮತ್ತು ಪರ ಊರುಗಳಿಂದ ಆಗಮಿಸಿದ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ದೊಡ್ಡ ರಂಗ ಪೂಜಾ ಸಮಿತಿ, ವರ ಮಹಾಲಕ್ಷ್ಮಿ ಪೂಜಾ ಸಮಿತಿ, ಗಣೇಶೋತ್ಸವ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಿದರು.
ವೈದಿಕ ವಿಧಿವಿಧಾನಗಳನ್ನು ಅರ್ಚಕ ವೃಂದ ನೆರವೇರಿಸಿದ್ದು, ಭಕ್ತರಿಗೆ ರುಚಿಕರ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪರವಾಗಿ ಕಾರ್ಯಕ್ರಮದಲ್ಲಿ ಸಹಕರಿಸಿದ ಸಮಿತಿ ಸದಸ್ಯರು, ಸಂಘ ಸಂಸ್ಥೆಗಳು, ಅಧಿಕಾರಿಗಳು, ಅಡುಗೆ ತಯಾರಕರು ಹಾಗೂ ಅರ್ಚಕರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು.