31 January 2026 | Join group

ಮಜಿ ಶಾಲಾ ನೂತನ ಕಟ್ಟಡ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ

  • 14 Oct 2025 09:28:01 AM

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ 'ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ' ಗೆ 'ಏನ್ ಎಮ್ ಪಿ ಟಿ (NMPT)' ಸಂಸ್ಥೆಯ ಸಿಎಸ್ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ ಸೋಮವಾರ ಜರಗಿತು.

 

ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸಂದೀಪ್ ಶೆಟ್ಟಿ ಅರೆಬೆಟ್ಟು ರವರಿಗೆ ಕಟ್ಟಡ ನಿರ್ಮಾಣ ಕಾಮಗಾರಿಯ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು.

 

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಸುಧಾಕರ, ಗೋಪಾಲಕೃಷ್ಣ ಭಟ್, ವಿಶ್ವನಾಥ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್ ರಾಕೋಡ್, ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.