ಮೂಲ: ಕಂಪದಕೋಡಿ ವೆದರ್ ರಿಪೋರ್ಟ್ | ಪ್ರಕಟಣೆ: ಸುಧಾವಾಣಿ ವೆದರ್ ಡೆಸ್ಕ್
ಕರಾವಳಿ ಮಲೆನಾಡು ಜಿಲ್ಲೆಗಳ ಅಲ್ಲಲ್ಲಿ ನಿನ್ನೆ ಸಾಮಾನ್ಯ ಮಳೆಯಾಗಿತ್ತು. ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿತ್ತು. ಬೆಂಗಳೂರು ಗ್ರಾಮಾಂತರ ಕೋಲಾರ ತುಮಕೂರು ಕಲ್ಬುರ್ಗಿ ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಿತ್ತು. ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಇವತ್ತು ಸಂಜೆ- ರಾತ್ರಿ ಮಳೆ ಮುನ್ಸೂಚನೆ ಇದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಸಾಮಾನ್ಯ ಮಳೆ ಮುನ್ಸೂಚನೆ ಇದೆ. ಕಾಸರಗೋಡು ದ.ಕ. ಜೆಲ್ಲೆಗಳ ಕರಾವಳಿ ತೀರಪ್ರದೇಶಗಳಲ್ಲಿ ಕಾಸರಗೋಡು ಜಿಲ್ಲೆಯ -ಸುಳ್ಯ/ಪುತ್ತೂರು ಗಡಿಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಉ.ಕ. ಜಿಲ್ಲೆಗಳ ಕರಾವಳಿ ತೀರದ ತಾಲ್ಲೂಕುಗಳಲ್ಲಿ ಸಾಮಾನ್ಯ ಮಳೆಯಾಗಬಹುದು. ನಾಳೆ ಕರಾವಳಿ ತೀರ ಪ್ರದೇಶಗಳಲ್ಲಿ ಮಳೆ ಪ್ರಮಾಣ ಜಾಸ್ತಿಯಾಗುವ ಮುನ್ಸೂಚನೆ ಇದೆ. ಸೆ 21ತನಕ ಪ್ರತಿದಿನ ಒಂದೆರಡು ಮಳೆ ಮುಂದುವರೆಯಬಹುದು.
ಮಲೆನಾಡಿನ ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಮಧ್ಯಾಹ್ನ ನಂತರ ಹೆಚ್ಚಿನ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಸೆ 21 ತನಕ ಮೋಡ- ಸಾಮಾನ್ಯ ಮಳೆ ಮುಂದುವರೆಯಬಹುದು.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮೈಸೂರು ಮಂಡ್ಯ ಬೆಂಗಳೂರು - ಗ್ರಾಮಾಂತರ ರಾಮನಗರ ಕೋಲಾರ ಚಿಕ್ಕಬಳ್ಳಾಪುರ ತುಮಕೂರು ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ರಾಯಚೂರು ಕೊಪ್ಪಳ ಬಾಗಲಕೋಟೆ ಬಿಜಾಪುರ ಯಾದಗಿರಿ ಕಲ್ಬುರ್ಗಿ ಬೀದರ್ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಭಾರಿ ಮಳೆಯಾಗಬಹುದು. ಬೆಳಗಾವಿ ಧಾರವಾಡ ಗದಗ ಹಾವೇರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿರುವ ಗಾಳಿಯ ತಿರುಗುವಿಕೆ ಕಾರಣದಿಂದ ಪಶ್ಚಿಮ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆರಂಭವಾಗಿದ್ದು. ಬಂಗಾಳಕೊಲ್ಲಿ ಸುಳಿಗಾಳಿ ಕಾರಣದಿಂದ ತಮಿಳುನಾಡು ಮತ್ತು ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ವಾರ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದೆ.