23 October 2025 | Join group

2026ರ SSLC, PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ – ನೋಡಿ ನಿಮ್ಮ ದಿನಾಂಕಗಳು!

  • 21 Sep 2025 01:10:24 PM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ SSLC ಹಾಗೂ ದ್ವಿತೀಯ PU ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ www.kseab.karnataka.gov.in ನಲ್ಲಿ ವೀಕ್ಷಿಸಬಹುದು.

 

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ದ್ವಿತೀಯ ಪಿಯುಸಿ ಪರೀಕ್ಷೆ – 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2026ರ ಏಪ್ರಿಲ್ 25 ರಂದು ಪರೀಕ್ಷೆ ಶುರುವಾಗಿ, ಮೇ 9 ರಂದು ಕೊನೆಗೊಳ್ಳಲಿದೆ.

 

ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ SSLC ಪರೀಕ್ಷೆ 2026ರ ಮಾರ್ಚ್ 18 ರಂದು ಆರಂಭವಾಗಿ ಏಪ್ರಿಲ್ 1 ರಂದು ಕೊನೆಗೊಳ್ಳಲಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ–2ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೇ 18ರಂದು ಪರೀಕ್ಷೆ ಆರಂಭವಾಗಿ ಮೇ 25 ರಂದು ಕೊನೆಗೊಳ್ಳಲಿದೆ.

 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣ www.kseab.karnataka.gov.in ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 9 ರ ವರೆಗೆ ಕಾಲಾವಕಾಶವನ್ನು ನೀಡಿದೆ.