ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಪೆರಿಯಡ್ಕ ಬಳಿ ಈ ಘಟನೆ ನಡೆದಿದೆ. ಮುಸ್ತಾಫ್ ಮತ್ತು ಮುಸ್ತಾಫ್ ಪೆರಿಯಡ್ಕ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಹಪಾಠಿಯ ಆರೋಗ್ಯ ವಿಚಾರಿಸಲು ಕೆಲವು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ವಿದ್ಯಾರ್ಥಿನಿಯರ ಒಟ್ಟಿಗೆ ತೆರಳಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅನ್ಯಕೂಟದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಒಟ್ಟಿಗೆ ಹೋಗುತ್ತಿದ್ದಕ್ಕೆ ಕೋಮು ದ್ವೇಷದಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಅದೇ ವೇಳೆ ಒಬ್ಬ ವಿದ್ಯಾರ್ಥಿಗೆ ಹಲ್ಲೆ ಕೂಡ ಮಾಡಿದ್ದಾರೆ. ಈ ಕುರಿತು ವಿದ್ಯಾರ್ಥಿಗಳು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಳಿಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.





