31 January 2026 | Join group

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು

  • 07 Nov 2025 06:28:14 PM

ಬೆಳಗಾವಿ: ಒಂದು ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

 

ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಅನ್ನದಾತರು ಇನ್ನಷ್ಟು ಸಿಡಿದೆದ್ದಿದ್ದು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಪೊಲೀಸರು ಲಾಠಿ ಪ್ರಹಾರ ಮಾಡುತ್ತಿದಂತೆ ರೈತರ ಸಹನೆಯ ಕಟ್ಟೆಯೊಡೆದಿದ್ದು, ಹೆದ್ದಾರಿಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನಗಳ ಗಾಜುಗಳು ಪುಡಿಪುಡಿಯಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.