31 January 2026 | Join group

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ ಯಾಕಾಗಿಲ್ಲ? ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್​ ಭಾಗವತ್

  • 10 Nov 2025 11:13:09 AM

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಆರ್.ಎಸ್.ಎಸ್ ಈವರೆಗೂ ನೋಂದಣಿಯಾಗದಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ನೋಂದಣಿಯಾಗದಿರುವ ಸಂಘ ಆರ್.ಎಸ್.ಎಸ್ ಗೆ ದೇಶದಲ್ಲಿ ಪ್ರತ್ಯೇಕ ಕಾನೂನು ಇದೆಯಾ? ಎಂದು ಕಾಂಗ್ರೆಸ್ ನಾಯಕರು ಕೇಳುತ್ತಿದ್ದರು. ಈ ಎಲ್ಲಾ ಪ್ರಶ್ನೆಗಳಿಗೆ ಇದೀಗ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉತ್ತರ ನೀಡಿದ್ದಾರೆ.

 

ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊಸಕೆರೆಹಳ್ಳಿ ಪಿಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಪ್ರಶ್ನೆಗಳಿಗೆ ಮೋಹನ್ ಭಾಗವತ್ ಉತ್ತರ ನೀಡಿದ್ದಾರೆ.

 

ಆರ್.ಎಸ್.ಎಸ್ ಸ್ಥಾಪನೆಯಾಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟೀಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ದಾಯ ಮಾಡಿಲ್ಲ. ಹಿಂದೂ ಧರ್ಮ ಕೂಡ ನೋಂದಣಿಯಾಗಿಲ್ಲ ಎಂದಿದ್ದಾರೆ.