ಬೆಳ್ತಂಗಡಿ: ಮಾಲಾಡಿಯ, ಬರ್ನ ಪ್ರದೇಶದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಬಳಸಿಕೊಂಡು ಒಬ್ಬ ವ್ಯಕ್ತಿ ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ.
ನೆರೆಮನೆಯವರಿಗೆ ಅನುಮಾನಾಸ್ಪದ ಚಲನವಲನ ಕಂಡುಬಂದ ತಕ್ಷಣ ಅವರು ಎಚ್ಚರಿಕೆ ನೀಡಿ ಸಾರ್ವಜನಿಕರ ಸಹಾಯ ಪಡೆದರು. ಸ್ಥಳೀಯರು ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ.





