ನವದೆಹಲಿ: ದೆಹಲಿ ಕೆಂಪುಕೋಟೆ ಸಮೀಪದ ಮೆಟ್ರೋ ಸ್ಟೇಷನ್ 1ರ ಬಳಿ ಭಾರೀ ಸ್ಪೋಟ ಸಂಭವಿಸಿದ್ದು, 9 ಜನ ಬಲಿಯಾಗಿದ್ದಾರೆ ಮತ್ತು 24 ಜನ ಗಾಯಗೊಂಡಿದ್ದಾರೆ. ಈ ಬಗ್ಗೆ ದೆಹಲಿಯ ಎಲ್ ಎನ್ ಜೆ ಪಿ ಆಸ್ಪತ್ರೆ ಖಚಿತ ಪಡಿಸಿದೆ ಎಂದು ವರದಿಯಾಗಿದೆ.
ಬಾಂಬ್ ಸ್ಫೋಟ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಎನ್ಐಎ ಮತ್ತು ಎಸ್.ಎಸ್.ಜಿ. ಪಡೆ, ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿವೆ.
ದೆಹಲಿ ಮುಂಬೈ ಸೇರಿ ಹಲವೆಡೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಕೆಂಪುಕೋಟೆ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಚಾಂದಿನಿ ಚೌಕ್, ಮಾರ್ಕೆಟ್ ರಸ್ತೆ, ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ.





