10 December 2025 | Join group

ಮಂಗಳೂರಿನಲ್ಲಿ ಮತ್ತೊಂದು ಸರಣಿ ಅಪಘಾತ : ಇಬ್ಬರು ಪ್ರಯಾಣಿಕರು ಸೇರಿ ಮೂವರು ಸ್ಥಳದಲ್ಲೇ ಸಾವು!

  • 15 Nov 2025 02:16:33 PM

ಮಂಗಳೂರು: ಎರಡು ಟ್ಯಾಂಕರ್, ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

 

ಟ್ಯಾಂಕರ್ ಒಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಕಾರಿಗೆ ಗುದ್ದಿದೆ. ಇದೇ ವೇಳೆ ಹಿಂದಿನಿಂದ ಬಂದ ಮತ್ತೊಂದು ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದಿದೆ. ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ಘಟನೆಯಲ್ಲಿ ಸ್ಥಳದಲ್ಲೇ ಆಟೋ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

 

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಂಗಳೂರು ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.