ಬಿಹಾರ: ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 20 ರಂದು ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಜೆಪಿ ಮೈತ್ರಿಕೂಟದ ಸರ್ಕಾರ ರಚನೆ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಹಾಜರಾಗಲಿದ್ದಾರೆ. ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿ ಪದವಿ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.
ಇಂದು ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ ನಡೆಯಲಿರುವ ಕೊನೆಯ ಸಚಿವ ಸಂಪುಟ ಸಭೆಗೆ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ನವೆಂಬರ್ 20 ರಂದು ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸುವ ಮೊದಲು ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಲಿದ್ದಾರೆ.





