10 December 2025 | Join group

ಮಂಗಳೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ

  • 18 Nov 2025 03:07:41 PM

ಮಂಗಳೂರು: ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದೆ. 

 

ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇವಸ್ಥಾನದಿಂದ ತನ್ವೀರ್​ಗೆ ಅದ್ದೂರಿ ಸ್ವಾಗತ ದೊರೆತಿದೆ.

 

ಇಂದಿನ ಸರ್ವಧರ್ಮ ಸಮ್ಮೇಳನದಲ್ಲಿ ತನ್ವೀರ್ ಅಹಮ್ಮದ್ ಉಲ್ಲಾ ಪ್ರಮುಖ ಭಾಷಣ ಮಾಡಲಿದ್ದು, ಸಚಿವ ಎಂ.ಬಿ. ಪಾಟೀಲ್ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.