ಪಾಟ್ನಾ : ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಜಯ ಸಾಧಿಸಿದ ನಂತರ ನಿತೀಶ್ ಕುಮಾರ್ ಅವರು ಇಂದು ಬೆಳಗ್ಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್.ಡಿ.ಎ) ಜನತಾದಳ (ಯುನೈಟೆಡ್) ನಿತೀಶ್ ಕುಮಾರ್ ನೇತೃತ್ವದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಹೊಸ ಸರ್ಕಾರ ರಚನೆ ಮಾಡುತ್ತಿದೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.
10 ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಮತ್ತಿತರರು ಹಾಜರಿದ್ದರು.





