10 December 2025 | Join group

ಮಂಗಳೂರಿನಲ್ಲಿ ಯುವಕನ ಮೇಲೆ ದಾಳಿ: ಆಸ್ಪತ್ರೆಗೆ ದಾಖಲು!

  • 25 Nov 2025 10:34:22 AM

ಮಂಗಳೂರು: ಸೋಮವಾರ ಸಂಜೆ ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಖಿಲೇಶ್ ಎಂಬ ಯುವಕನ ಮೇಲೆ ನಾಲ್ಕು ಜನರ ತಂಡವೊಂದು ತಲ್ವಾರ್​​ನಿಂದ ದಾಳಿ ಮಾಡಿದೆ.

 

ಬೈಕ್​ನಲ್ಲಿ ಬಂದ ತಂಡ ದಾಳಿ ಮಾಡಿದ್ದು ತಲ್ವಾರ್​​ನಿಂದ ಮೊಣಕೈಗೆ ಗಾಯಗೊಳಿಸಿದೆ. ಗಾಯಾಳು ಅಖಿಲೇಶ್​ಗೆ ಮೂಡಬಿದಿರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

ಒಟ್ಟು ನಾಲ್ಕು ಜನ ದುಷ್ಕರ್ಮಿಗಳು ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದಾರೆ. ಮೂವರು ಒಂದೇ ಬೈಕ್​ನಲ್ಲಿ ಪರಾರಿಯಾಗಿದ್ದಾರೆ. ಮತ್ತೋರ್ವ ಆರೋಪಿ ಸಿನಾನ್ ಪರಾರಿಯಾಗಲು ಯತ್ನಿಸಿದ್ದಾನೆ. ಸಿಕ್ಕ ಸಿಕ್ಕ ವಾಹನಗಳನ್ನು ಬಲವಂತವಾಗಿ ಅಡ್ಡಹಾಕಿದ್ದಾನೆ. ಆದರೆ ಯಾರು ಕೂಡ ನಿಲ್ಲಿಸಿಲ್ಲ. ಓರ್ವ ಬೈಕ್ ಸವಾರ ಈತನ ಪುಂಡಾಟದಿಂದ ಗಾಬರಿಯಾಗಿ ಬೈಕ್​ನಿಂದ ಬಿದ್ದಿದ್ದಾನೆ. ಇನ್ನು ಸಿನಾನ್​ನನ್ನು ಸ್ಥಳೀಯರು ಹಿಡಿದು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.