ಚಾಮರಾಜನಗರ: ಶಬರಿಮಲೆ ಯಾತ್ರೆ ಆರಂಭವಾಗಿದೆ. ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪ್ರಕರಣಗಳು ಪತ್ತೆಯಾಗಿವೆ. ಈ ಮಧ್ಯ ಕರ್ನಾಟಕ ಆರೋಗ್ಯ ಇಲಾಖೆ ಯಾತ್ರಿಕರಿಗೆ ಎಚ್ಚರಿಕೆ ನೀಡಿದೆ. ಇದೀಗ ಕೇರಳದ ಮಗ್ಗುಲಿಗೇ ಇರುವ ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ ಗುಂಡ್ಲುಪೇಟೆ ತಾಲ್ಲೂಕಿನ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಭಕ್ತರ ಮೇಲೆ ನಿಗಾ ಹೆಚ್ಚಿಸಲಾಗಿದೆ.
ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಸಿಬ್ಬಂದಿ ಯಾತ್ರಿಕರಿಗೆ ಜಾಗೃತಿ ಮೂಡಿಸುತ್ತಿದ್ದು, ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
ಕೇರಳಕ್ಕೆ ತೆರಳುವ ಯಾತ್ರಿಕರು ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಾವಶ್ಯಕವಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಮತ್ತು ಚೆಕ್‌ಪೋಸ್ಟ್ ಸಿಬ್ಬಂದಿ ಒಟ್ಟಾಗಿ ಗಡಿಭಾಗದಲ್ಲಿ 24 ಗಂಟೆಗಳ ನಿಗಾವಹಿಸುತ್ತಿದ್ದಾರೆ.





