31 January 2026 | Join group

ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ

  • 28 Nov 2025 11:41:17 AM

ಮಂಗಳೂರು: ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಮೋದಿ ಅವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಉಡುಪಿಯತ್ತ ಪ್ರಯಾಣ ಬೆಳೆಸಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಹೆಲಿಪ್ಯಾಡ್​ಗೆ ಆಗಮಿಸಿದರು. 
 

ಅಲ್ಲಿಂದ ಸುಮಾರು 1.8 ಕಿಲೋ ಮೀಟರ್ ದೂರದ ವರೆಗೆ ರೋಡ್​ ಶೋ ನಡೆಸಿದರು. ಈ ವೇಳೆ ಮೋದಿಯನ್ನ ನೋಡಲು ರಸ್ತೆ ಬದಿಯಲ್ಲಿ ಜನರು ಕಿಕ್ಕಿರಿದು ನಿಂತಿದ್ದರು. ಬಳಿಕ ನೇರವಾಗಿ ಕೃಷ್ಣಮಠಕ್ಕೆ ತೆರಳಿದ್ದಾರೆ. 

 

ಅಲ್ಲಿ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ತೀರ್ಥಮಂಟಪ ಅನಾವರಣದಲ್ಲಿ ಪಿಎಂ ಮೋದಿ ಭಾಗಿಯಾಗಲಿದ್ದು, ಲಕ್ಷಕಂಠ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಭಗವದ್ಗೀತೆಯ 10 ಶ್ಲೋಕಗಳನ್ನ ಮೋದಿ ಪಠಿಸಲಿದ್ದಾರೆ.