ಬೆಂಗಳೂರು: ರಾಮಮೂರ್ತಿನಗರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಬೆಂಕಿ ಅಪಘಾತ ಎಂದು ಆರಂಭದಲ್ಲಿ ವರದಿಯಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು ಇದೀಗ ಆಘಾತಕಾರಿ ತಿರುವು ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಳು ಇದು ಅಪಘಾತವಲ್ಲ, ಪೂರ್ವಯೋಜಿತ ಕೊಲೆ ಎಂದು ಸ್ಪಷ್ಟಪಡಿಸಿವೆ.
ಮಂಗಳೂರಿನ ಕಾವೂರು ಮೂಲದ ಶರ್ಮಿಳಾ, ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದು ಖಾಸಗಿ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ರಾತ್ರಿ ಅವರು ಮನೆಯಲ್ಲೇ ಒಬ್ಬರೇ ಇದ್ದರು.
ಪೊಲೀಸ್ ತನಿಖೆಯಲ್ಲಿ, ಶರ್ಮಿಳಾ ಪರಿಚಯಸ್ಥನಾಗಿದ್ದ, ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಕೇರಳ ಮೂಲದ ಕರ್ನಲ್ ಕುರೈ ಕೊಲೆಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಕೊಲೆಯನ್ನು ಮರೆಮಾಚಲು ಬೆಂಕಿ ಹಚ್ಚಲಾಗಿದೆ ಎಂಬ ಆರೋಪದ ಮೇಲೆ ಕುರೈ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ, ಉದ್ದೇಶ ಮತ್ತು ಇನ್ನಿತರ ಪಾತ್ರಗಳ ಕುರಿತು ತನಿಖೆ ಮುಂದುವರಿದಿದೆ. ಅಪಘಾತವೆಂದು ಭಾಸವಾಗಿದ್ದ ಸಾವು ಇದೀಗ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ.
ಈ ಹಿಂದಿನ ವರದಿಗೆ ಇಲ್ಲಿ ಕ್ಲಿಕ್ ಮಾಡಿ : ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ದುರಂತ: ಮಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ಶರ್ಮಿಳಾ ಉಸಿರುಗಟ್ಟಿ ಸಾವು





