ದ್ವಿತೀಯ ಪಿಯು ಫಲಿತಾಂಶ ಪ್ರಕಟಣೆ ಮುಂದೂಡಿಕೆ: ಈಗ ಏಪ್ರಿಲ್ 9 ರಂದು ಪ್ರಕಟ

  • 08 Apr 2026 12:19:17 AM

ಬೆಂಗಳೂರು: ದ್ವಿತೀಯ ಪಿಯು (PUC) ಪರೀಕ್ಷೆ-1ರ ಫಲಿತಾಂಶವನ್ನು ಮಾರ್ಚ್ 7 ರಂದು ಪ್ರಕಟಿಸಲು ನಿರ್ಧರಿಸಲಾಗಿದ್ದರೂ, ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಣೆ ಮುಂದೂಡಲಾಗಿತ್ತು.

 

ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಇಂದು ಫಲಿತಾಂಶ ಪ್ರಕಟಿಸುವುದು ಸಾಧ್ಯವಾಗಲಿಲ್ಲ ಎಂದು ತಿಳಿಸಲಾಗಿದೆ.

 

ಈ ಹಿನ್ನೆಲೆ, ದ್ವಿತೀಯ ಪಿಯು ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 9 ರಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

 

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕವೇ ಫಲಿತಾಂಶವನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.