23 June 2026 |

ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ; ರೂ.20 ಲಕ್ಷ ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ಆರಂಭ

  • 23 Jun 2026 11:59:28 AM

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಬಹುಕಾಲದ ಬೇಡಿಕೆಯಾಗಿದ್ದ ಅರಳ ಗ್ರಾಮದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.20 ಲಕ್ಷಗಳ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು.

 

ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮಂಜೂರು ಮಾಡಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಈ ಕಾಮಗಾರಿಗೆ ಅನುದಾನ ಮಂಜೂರು ಮಾಡುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ವಿಶೇಷ ಆಸಕ್ತಿ ವಹಿಸಿದ್ದು, ಅನುದಾನ ಮಂಜೂರಾತಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಸಹಕಾರ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರದ ಸೌಲಭ್ಯ ದೊರೆಯಲಿದ್ದು, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಲಿದೆ.

 

ಉದ್ಘಾಟನಾ ಕಾರ್ಯಕ್ರಮದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಗ್ರಾಮ ಪಂಚಾಯತ್ ಸದಸ್ಯರಾದ ದೇಜಪ್ಪ ಪೂಜಾರಿ, ನಳಿನಿ ನಾಯ್ಕ್, ಜಗದೀಶ್ ಕೊಯಿಲ, ಎಂ.ಬಿ. ಅಶ್ರಫ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಅಂಚನ್, ಅರಳ ವಲಯ ಕಾಂಗ್ರೆಸ್ ಅಧ್ಯಕ್ಷ ಲತೀಫ್ ಸುಂಟಿಹಿಟ್ಲು, ಅಶ್ರಫ್ ಕುಟ್ಟಿಕಲ್, ಸಂತೋಷ್ ಪಿಂಟೋ, ಸುರೇಶ್ ಜೋರ, ಅಶ್ರಫ್ ಮುಲ್ಲರಪಟ್ಟಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.