ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ 16 ವರ್ಷದ ಪ್ರೀತಿ ಎಂಬ ಬಾಲಕಿ ಮೇ 22ರಿಂದ ಕಾಣೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾಗಿರುವ ಬಾಲಕಿ ಸುಮಾರು 5 ಅಡಿ 2 ಇಂಚು ಎತ್ತರ ಹೊಂದಿದ್ದು, ಗೋಧಿ ಮೈಬಣ್ಣ ಹಾಗೂ ಸಾಧಾರಣ ಮೈಕಟ್ಟಿನವರಾಗಿದ್ದಾರೆ. ಅವರು ಕನ್ನಡ, ಇಂಗ್ಲಿಷ್ ಮತ್ತು ತುಳು ಭಾಷೆಗಳನ್ನು ಮಾತನಾಡುತ್ತಾರೆ ಎಂದು ತಿಳಿದುಬಂದಿದೆ.
ಬಾಲಕಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಉಡುಪಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2526444, ಮೊಬೈಲ್ ಸಂಖ್ಯೆ 9480805458, 8277988949, 8277988950 ಅಥವಾ ಉಡುಪಿ ಮಹಿಳಾ ಪೊಲೀಸ್ ಠಾಣೆಯ 0820-2525599 ಸಂಖ್ಯೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.





