25 October 2025 | Join group

ಹತ್ತನೇ ತರಗತಿಯ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

  • 02 May 2025 12:38:52 PM

ದಕ್ಷಿಣ ಕನ್ನಡ, ಮೇ 02: ಹತ್ತನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. 2024-25ರ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 62.14% ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

 

ಈ ವರ್ಷವೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.

 

ದಕ್ಷಿಣ ಕನ್ನಡ ಜಿಲ್ಲೆಗೆ ಶೇ.91.12 ಫಲಿತಾಂಶ ಬಂದಿದ್ದು, ಉಡುಪಿ ಜಿಲ್ಲೆಗೆ ಶೇ.89.96 ಬಂದಿದೆ.

 

ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ತೃತೀಯ ಮತ್ತು ಚತುರ್ಥ ಸ್ಥಾನ ದೊರೆತಿದೆ.

 

ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

 

ಈ ಬಾರಿ 8.96 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 4,61563 ಹುಡುಗರು 4,34,884 ಹುಡಗಿಯರು ಪರೀಕ್ಷೆಗೆ ದಾಖಲಾಗಿದ್ದರು.

 

ಈ ಬಾರಿ ಎಸ್​ಎಸ್​​ಎಲ್​ಸಿ ಪರೀಕ್ಷೆಯ ಮೌಲ್ಯಮಾಪನ 240 ಮೌಲ್ಯಮಾಪನ ಕೇಂದ್ರಗಳಲ್ಲಿ 65,000 ಮೌಲ್ಯಮಾಪಕರಿಂದ ನಡೆದಿತ್ತು.