06 August 2026 |

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ; ಆಕ್ಟಿವಾ ಜಖಂ

  • 06 Aug 2026 10:28:49 AM

ಪುತ್ತೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ರಸ್ತೆ ಬದಿಯ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರಿನ ಪಡೀಲ್‌ನಲ್ಲಿ ನಡೆದಿದೆ.

 

ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಆಕ್ಟಿವಾ, ಲಾರಿ ಹಾಗೂ ಅಂಗಡಿಗೆ ಹಾನಿಯಾಗಿದೆ.

 

ಮಾಹಿತಿ ತಿಳಿದ ಕೂಡಲೇ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ.