ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-75)ಯ ಮಾಣಿ–ಸೂರಿಕುಮೇರು ನಡುವಿನ ಪೆಟ್ರೋಲ್ ಬಂಕ್ ಸಮೀಪ ಗುರುವಾರ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಲಭ್ಯ ಮಾಹಿತಿಯ ಪ್ರಕಾರ, ವೇಗವಾಗಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ನಿಖರ ಕಾರಣ, ಗಾಯಾಳುವಿನ ಗುರುತು ಹಾಗೂ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.





