01 February 2026 | Join group

ಗೋವಾದ ಶಿರ್ಗಾಂವ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 7 ಭಕ್ತರ ದುರ್ಮರಣ ಮತ್ತು 50 ಜನರಿಗೂ ಹೆಚ್ಚು ಗಾಯ

  • 03 May 2025 08:51:34 AM

ಗೋವಾ, ಮೇ 03 : ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದಲ್ಲಿ ಶುಕ್ರವಾರ ನಡೆದ ವಾರ್ಷಿಕ ಜಾತ್ರಾ ಮೆರವಣಿಗೆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 6 ಜನರ ದುರ್ಮರಣವಾಗಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

ಹಠಾತ್ ಜನಸಂದಣಿ ಉಂಟಾದ ಕಾರಣ ಈ ಘಟನೆ ನಡೆದಿದೆ. ಜನಸಂದಣಿಯಿಂದ ತಪ್ಪಿಸಿಕೊಳ್ಳಲು ಜನರು ಹೆಣಗಾಡುತ್ತಿರುವಾಗ ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದವು. ತುರ್ತು ಸೇವೆಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದ್ದಾರೆ.

 

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಹಸ್ತಾಂತರಿಸಲಾಗಿದೆ. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

 

ಕಾಲ್ತುಳಿತತಕೆ ನಿಖರವಾದ ಕಾರಣಗಳನ್ನು ಅಧಿಕಾರಿಗಳು ದೃಢಪಡಿಸಿಲ್ಲ ಆದರೆ ಪ್ರಾಥಮಿಕ ವರದಿಗಳು ಜನದಟ್ಟಣೆ ಮತ್ತು ಜನಸಂದಣಿ ನಿಯಂತ್ರಣ ಕ್ರಮಗಳ ಕೊರತೆಯಿಂದಾಗಿ ಇದು ಸಂಭವಿಸಿದೆ ಎಂದು ವರದಿಯಾಗಿದೆ.