ಬೆಂಗಳೂರು, ಮೇ 07: ಮೇ 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಮೇ 07 ರ ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಈ ಯಶಸ್ವೀ ಆಪರೇಷನ್ ಸಿಂಧೂರ್ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲು ನಿರ್ಧರಿಸಿದ್ದಾರೆ,
ಕರ್ನಾಟಕ ಸರಕಾರದಿಂದ ಹೊರಡಿಸಿದ ಸುತ್ತೋಲೆಯಲ್ಲಿ, 'ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಮಾನ್ಯ ಸಚಿವರ ಸೂಚನೆಯ ಮೇರೆಗೆ ಕರ್ನಾಟಕದ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇವೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು ಕ್ರಮ ಕೈಗೊಳ್ಳಲು ಈ ಮೂಲಕ ಆದೇಶಿಸಿದೆ' ಎಂದು ನಮೂದಿಸಲಾಗಿದೆ.
ಆದ್ದರಿಂದ, ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಇರುವ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನೆರವೇರಲಿದೆ.