ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಚ್ಚನಹಳ್ಳಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಮನ್ವಿತಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸಂಬಂಧ ಹಂದನಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





