ಉಪ್ಪಳ: ಒಂದೇ ನೋಂದಣಿ ಸಂಖ್ಯೆಯನ್ನು ಹೊಂದಿದ್ದ ಎರಡು ಮಹೀಂದ್ರಾ ಥಾರ್ ಎಸ್ಯುವಿ ವಾಹನಗಳನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದ ಘಟನೆ ಉಪ್ಪಳದಲ್ಲಿ ನಡೆದಿದೆ.
ಎರಡೂ ವಾಹನಗಳಲ್ಲಿ ಕೆಎಲ್ 14 ಎಜೆ 3008 ಎಂಬ ಒಂದೇ ನೋಂದಣಿ ಸಂಖ್ಯೆಯ ನಂಬರ್ ಪ್ಲೇಟ್ ಅಳವಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿ ವಿಷ್ಣು ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ಎರಡು ವಾಹನಗಳನ್ನು ಪರಿಶೀಲಿಸಿದೆ. ಸಬ್ಇನ್ಸ್ಪೆಕ್ಟರ್ ಶಬರಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವಾಹನಗಳ ನೋಂದಣಿ ಹಾಗೂ ದಾಖಲೆಗಳ ಕುರಿತು ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.





