20 September 2026 |

ಬಂಟ್ವಾಳ ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

  • 20 Sep 2026 11:30:51 AM

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದೆ.

 

ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಎಂದು ಗುರುತಿಸಲಾಗಿದೆ.

 

ಪೋಕ್ಸೋ ಕಾಯ್ದೆ-2012ರ ವಿವಿಧ ಕಲಂಗಳು ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿ ಅನಂತ ಪದ್ಮನಾಭ ಅವರು ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದರು.

 

ತನಿಖೆ ಪೂರ್ಣಗೊಂಡ ಬಳಿಕ ಅಬ್ದುಲ್ ಲತಿಫ್ ಸೇರಿದಂತೆ ಮೂವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮುಂದುವರಿದಿತ್ತು.

 

ವಿಚಾರಣೆ ವೇಳೆ ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಾನು ಕೆ.ಎಸ್. ಅವರು ಸೆಪ್ಟೆಂಬರ್ 19ರಂದು ಶಿಕ್ಷೆಯ ಆದೇಶ ಪ್ರಕಟಿಸಿದ್ದಾರೆ. ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯ ಜೊತೆಗೆ ₹80 ಸಾವಿರ ದಂಡ ವಿಧಿಸಲಾಗಿದೆ.

 

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.