ಕಾರ್ಕಳ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ.
ರಮಾನಾಥ ರೈ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವುದಾಗಿ ತಿಳಿದುಬಂದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ. ಗಾಯಗೊಂಡವರ ನಿಖರ ಸಂಖ್ಯೆ ಹಾಗೂ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.





