21 September 2026 |

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ

  • 21 Sep 2026 02:04:28 PM

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿ ಬಳಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿಯಾದ ಘಟನೆ ಸೆಪ್ಟೆಂಬರ್ 20ರ ಮುಂಜಾನೆ ನಡೆದಿದೆ.

 

ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಶಮೀರ್ ಎಂಬವರು ಲಾರಿ ಚಲಾಯಿಸಿಕೊಂಡು ಬರುತ್ತಿದ್ದರು. ನೆಲ್ಯಾಡಿ ತಲುಪಿದಾಗ, ನೆಲಮಂಗಲ ನಿವಾಸಿ ರಾಜ ಎಂ. ಅವರಿಗೆ ಸೇರಿದ ಮದ್ಯದ ಸರಕು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

 

ಡಿಕ್ಕಿಯ ತೀವ್ರತೆಗೆ ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯ ಪರಿಣಾಮ ಮೂರು ವಾಹನಗಳಿಗೂ ಹಾನಿಯಾಗಿದ್ದು, ಲಾರಿಯಲ್ಲಿದ್ದ ಮದ್ಯದ ಸರಕಿಗೂ ಹಾನಿಯಾಗಿದೆ.

 

ಅಪಘಾತದಲ್ಲಿ ಲಾರಿ ಚಾಲಕರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ನೆಲ್ಯಾಡಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

 

ಲಾರಿ ಮಾಲೀಕ ರಾಜ ಅವರು ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.