25 September 2026 |

ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆಗೆ ಸರ್ಕಾರದ ಸಿದ್ಧತೆ

  • 25 Sep 2026 02:51:55 PM

ಬೆಂಗಳೂರು: ಕರ್ನಾಟಕದಲ್ಲಿ ಕಾರ್ಮಿಕರಿಗೆ ನೀಡಲಾಗುವ ಕನಿಷ್ಠ ವೇತನವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.

 

ಪ್ರಸ್ತಾವಿತ ಪರಿಷ್ಕರಣೆಯಂತೆ ತಾಲ್ಲೂಕು ಮಟ್ಟದಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ₹19,000ಕ್ಕೆ ನಿಗದಿಪಡಿಸುವ ಚಿಂತನೆ ಇದೆ. ಜಿಲ್ಲಾಮಟ್ಟದಲ್ಲಿ ₹21,000 ಹಾಗೂ ಬೆಂಗಳೂರಿನಲ್ಲಿ ₹23,000 ಕನಿಷ್ಠ ವೇತನ ನಿಗದಿಪಡಿಸುವ ಪ್ರಸ್ತಾವನೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

ಕಾರ್ಮಿಕರ ಜೀವನ ವೆಚ್ಚ ಹಾಗೂ ಸ್ಥಳೀಯ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಕನಿಷ್ಠ ವೇತನ ಪರಿಷ್ಕರಣೆಗೆ ಕ್ರಮ ಮುಂದುವರಿಸಲಾಗುತ್ತಿದೆ ಎಂದು ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.