25 September 2026 |

ಪುಂಜಾಲಕಟ್ಟೆಯಲ್ಲಿ ಅಕ್ರಮ ಮರಳು ದಾಸ್ತಾನು; ಪ್ರಕರಣ ದಾಖಲು

  • 25 Sep 2026 02:54:28 PM

ಬಂಟ್ವಾಳ: ಕಾವಳಮೂಡೂರು ಗ್ರಾಮದ ಪಂಜಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಇಟ್ಟಿರುವುದು ಪತ್ತೆಯಾಗಿದ್ದು, ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸೆಪ್ಟೆಂಬರ್ 23ರಂದು ಪುಂಜಾಲಕಟ್ಟೆ ಪೊಲೀಸರು ಗಸ್ತು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪಂಜಾಡಿ ಭಾಗದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿ ದಾಳಿ ನಡೆಸಿದರು.

 

ಈ ವೇಳೆ ಪೊಲೀಸರನ್ನು ಗಮನಿಸಿದ ಅಲ್ಲಿದ್ದ ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಸ್ಥಳದಲ್ಲಿದ್ದ ಮರಳು ಸೇರಿದಂತೆ ವಿವಿಧ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.