26 September 2026 |

ಅಲಂಕಾರು: ಥಾರ್ ಡಿಕ್ಕಿಗೆ ಬೈಕ್ ಸವಾರ ಸಾವು; ಚಾಲಕ ಪರಾರಿ

  • 26 Sep 2026 10:05:59 AM

ಅಲಂಕಾರು: ಸಮೀಪ ವೇಗವಾಗಿ ಬಂದ ಥಾರ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

 

ಮೃತರನ್ನು ಅಲಂಕಾರು ನಿವಾಸಿ ಲೋಕೇಶ್ ಗೌಡ ಎಂದು ಗುರುತಿಸಲಾಗಿದೆ.

 

ಅಪಘಾತದ ಬಳಿಕ ಥಾರ್ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಬಳಿಕ ಥಾರ್ ವಾಹನ ಮನೆಯೊಂದರ ಬಳಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

 

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಥಾರ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.