26 October 2025 | Join group

ಪುತ್ತೂರಿನ ಕಬಕದಲ್ಲಿ ಬೈಕ್ ಮತ್ತು ಬಸ್ ಡಿಕ್ಕಿ : ಅಪ್ಪನ ಸಾವು, ಮಗನಿಗೆ ಗಂಭೀರ ಗಾಯ

  • 11 May 2025 08:00:16 PM

ಕಬಕ, ಮೇ 11 : ಇಂದು ಭಾನುವಾರ ಮೇ 11 ರಂದು ಕಬಕದಲ್ಲಿ ದ್ವಿಚಕ್ರ ವಾಹನ ಮತ್ತು ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

 

ಮೃತರನ್ನು ಪುತ್ತೂರು ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಅರುಣ್ ಕುಲಾಲ್ ಎಂದು ಗುರುತಿಸಲಾಗಿದ್ದು, ಅವರ ಮಗ ಧ್ಯಾನ್ ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಬಕ-ಕುವೆತ್ತಿಲ ಬಳಿ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅಪಘಾತ ಸಂಭವಿಸಿದೆ.

 

ವರದಿಗಳ ಪ್ರಕಾರ, ಬಸ್ ಮಂಗಳೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು ಮತ್ತು ಬೈಕ್ ಮಾಣಿ ಕಡೆಯಿಂದ ಹೋಗುತ್ತಿತ್ತು. ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂದಿದ್ದರು. ಬಸ್ ಮತ್ತೊಂದು ಟ್ರ್ಯಾಕ್ ಗೆ ಹೋಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

 

ಇಬ್ಬರೂ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅರುಣ್ ಕುಲಾಲ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ತನಿಖೆ ಆರಂಭಿಸಿದ್ದಾರೆ.