06 November 2026 |

ಗ್ರಾಮೀಣ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೊಸ ಹೆಜ್ಜೆ: 1,000 ಶಾಲೆಗಳನ್ನು ದತ್ತು ಪಡೆಯಲು ಖಾಸಗಿ ಸಂಸ್ಥೆಗಳಿಗೆ ಸಿಎಂ ಆಹ್ವಾನ!

  • 05 Nov 2026 01:48:58 PM

ಬೆಂಗಳೂರು: ಕರ್ನಾಟಕದ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.

 

'ನಮ್ಮ ಶಾಲೆ ನಮ್ಮ ಜವಾಬ್ದಾರಿ' ಕಾರ್ಯಕ್ರಮದ ಮೂಲಕ ಮೊದಲ ಹಂತದಲ್ಲಿ 1,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ಹಾಗೂ ವಿವಿಧ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 15 ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, 56 ಶಾಲೆಗಳ ಅಭಿವೃದ್ಧಿಗಾಗಿ ಒಟ್ಟು ₹206.10 ಕೋಟಿ ಅನುದಾನವನ್ನು ನಿಗದಿಪಡಿಸಲಾಗಿದೆ.

 

ಇದಲ್ಲದೆ, ಮುಂದಿನ ಹಂತದಲ್ಲಿ ಇನ್ನೂ 2,000 ಸರ್ಕಾರಿ ಶಾಲೆಗಳನ್ನು ಈ ಯೋಜನೆಯಡಿ ತರಲು ಸರ್ಕಾರ ಉದ್ದೇಶಿಸಿದೆ. ಗ್ರಾಮೀಣ ಶಾಲೆಗಳಿಗೆ ಉತ್ತಮ ಸೌಲಭ್ಯ ಕಲ್ಪಿಸುವುದು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಈ ಕಾರ್ಯಕ್ರಮದ ಪ್ರಮುಖ ಗುರಿಯಾಗಿದೆ.