21 June 2025 | Join group

ಕಂಪನಿಯೊಂದರ ಮೇಲಿದ್ದ ಉದ್ಯೋಗ ವಂಚನೆ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ್ದ ಇಬ್ಬರು ಪೊಲೀಸಪ್ಪನವರ ಅಮಾನತು

  • 19 May 2025 08:37:30 PM

ಮಂಗಳೂರು : ವಿದೇಶದಲ್ಲಿ ಉದ್ಯೋಗ ತೆಗೆಸಿಕೊಡುವ ನೆಪದಲ್ಲಿ ವಂಚನೆ ಮಾಡುತ್ತಿದ್ದ ಕಂಪನಿ ಒಂದರ ತನಿಖೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಫಲವಾದ ಇಬ್ಬರು ಪೊಲೀಸರಿಗೆ ಗೇಟ್ ಪಾಸ್ ನೀಡಲಾಗಿದೆ. ಮೆಸರ್ಸ್ ಹೈರ್‌ಗ್ಲೋ ಎಲಿಗಂಟ್ ಓವರ್‌ಸೀಸ್ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ (M/s Hireglow Elegant Overseas International Pvt Ltd) ಎಂಬ ಸಂಸ್ಥೆಯ ವಿರುದ್ಧ ವಂಚನೆಯ ಪ್ರಕರಣ ದಾಖಲಾಗಿತ್ತು.

 

ಈ ಕಂಪನಿಯ ವಿರುದ್ದ ದೂರುಗಳು ಇದ್ದರು ಸಹ, ಸಮಯೋಚಿತ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಫಲವಾದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೋಮಶೇಖರ್ ಜಿಸಿ ಯವರನ್ನು ಅಮಾನತುಗೊಳಿಸಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಉಮೇಶ್ ಕುಮಾರ್ ಎಂ ಎನ್ ರವರು ಕೂಡ ಅಮಾನತುಗೊಂಡಿದ್ದಾರೆ.

 

ಈ ಇಬ್ಬರ ನಿಷ್ಕ್ರಿಯತೆ ಮತ್ತು ಮೇಲ್ವಿಚಾರಣಾ ಜವಾಬ್ದಾರಿಯ ಕೊರತೆಯಿಂದಾಗಿ ಆರೋಪಿಗಳು ಉದ್ಯೋಗ ಆಕಾಂಕ್ಷಿಗಳಿಗೆ 1.82 ಕೋಟಿ ರೂ.ಗೂ ಹೆಚ್ಚು ಹಣವನ್ನು ವಂಚಿಸುವುದನ್ನು ಮುಂದುವರಿಸಿದ್ದಾರೆ ಎಂದು ಆರೋಪಿಸಲಾಗಿದೆ.

 

ಈ ಪೊಲೀಸ್ ಅಧಿಕಾರಿಗಳಿಗೆ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಣೆ ಮಾಡುವುದು, ಈ ವಂಚನೆಯಾದವರ ವಿವರ ಪಡೆದುಕೊಳ್ಳುವುದು, ಸಾಕ್ಷಿಗಳನ್ನು ಪರಿಶೀಲಿಸುವುದು ಮತ್ತು ಹಣಕಾಸಿನ ವಹಿವಾಟು ಇನ್ನಿತರ ಜವಾಬಾರಿಗಳನ್ನು ಈ ಕೇಸಿಗೆ ಸಂಬಂಧಪಟ್ಟಂತೆ ವಹಿಸಲಾಗಿತ್ತು ಆದರೆ ಇವರುಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಮತ್ತು ಕರ್ತವ್ಯ ಉಲ್ಲಂಘನೆಯನ್ನು ಮಾಡಿರುವುದರಿಂದ ಮಂಗಳೂರು ಪೊಲೀಸ್ ಇಲಾಖೆ ಇಬ್ಬರೂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಗಳನ್ನು ಕೈಗೊಂಡಿದೆ.