21 June 2025 | Join group

ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿಯ ಬಂಧನ

  • 24 May 2025 01:50:18 PM

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಹಿನ್ನಲೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಕಳಿ‌ ಗ್ರಾಮದ ಮಠದ ಸ್ವಾಮೀಜಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಕೊಲೆ ಬೆದರಿಕೆಯನ್ನೂ ಹಾಕಿದ ಆರೋಪದಲ್ಲಿ ಬೆಳಗಾವಿಯ ರಾಮಮಂದಿರ ಮಠದ‌ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ​ಜೈಲಿಗಟ್ಟಿದ್ದಾರೆ.

 

ನಡೆದ ಘಟನೆಯ ವಿವರ

ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದಾರೆ. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ತಂಗಿದ್ದರು. ಬಳಿಕ ಮೇ 15ರಂದು ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿದ್ದು, 2 ಕಡೆ ವಾಸ್ತವ್ಯ ಇದ್ದಾಗ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಸ್ವಾಮೀಜಿ ಎಂದು ಆರೋಪದಲ್ಲಿ ಹೇಳಲಾಗಿದೆ.

 

ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಸ್ವಾಮೀಜಿ ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.

 

ಬಾಲಕಿಯ ತಂದೆ-ತಾಯಿಯೇ ಬಾಲಕಿಯನ್ನು ವಾರಗಟ್ಟಲೇ ಮಠದಲ್ಲೇ ಮಠದಲ್ಲಿ ಬಿಟ್ಟು ಹೋಗುತ್ತಿದ್ದರು. ಅದೇ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಸ್ವಾಮೀಜಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದ ಆರೋಪ ಕೂಡ ಇದೆ. 2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಇದೀಗ ಅತ್ಯಾಚಾರ ಆರೋಪ ಹಿನ್ನಲೆ ಸ್ವಾಮೀಜಿಯನ್ನು ಯಾವುದೇ ಕಾರಣಕ್ಕೂ ಬಿಡದಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

ಈ ಸಂಬಂಧ ಮೂಡಲಗಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಎಫ್ಐಆರ್ (FIR) ದಾಖಲಿಸಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಸ್ವಾಮೀಜಿಯನ್ನು ಪೋಕ್ಸೋ ಕೇಸಲ್ಲಿ ಅರೆಸ್ಟ್‌ ಮಾಡಿ ಜೈಲಿಗೆ ಕಳುಹಿಸಲಾಗಿದೆ.