ದ.ಕ ಜಿಲ್ಲೆಗೆ ನೂತನ SP ಆಗಿ ಡಾ. ಅರುಣ್ ಕುಮಾರ್ ಅಧಿಕಾರ ಸ್ವೀಕಾರ: ಮಾಹಿತಿ ನೀಡಲು ಮೊಬೈಲ್ ನಂಬರ್ ಹಂಚಿಕೆ

  • 30 May 2025 05:25:21 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಕೋಮು ಗಲಭೆಗಳಿಗೆ ಸಂಬಂಧಪಟ್ಟಂತೆ ನಡೆದ ಬೆಳವಣಿಗೆಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯ ಸರಕಾರ ಪೊಲೀಸ್ ಅಧಿಕಾರಿಗಳ ಬದಲಾವಣೆ ಮಾಡಿದೆ. ಇಂದು ಉಡುಪಿ ಜಿಲ್ಲೆಗೆ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಸ್ತಾಂತರಿಸಿದ್ದಾರೆ.

 

ಮೇ 30 ರಂದು ಡಾ. ಅರುಣ್ ಕೆ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಅವರು, 'ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು' ಅಕ್ರಮ ಗಣಿಗಾರಿಕೆ, ಬೆಟ್ಟಿಂಗ್ ಹಾಗೂ ಇತರ ಕಾನೂನುಬಾಹಿರ ಚಟುವಟಿಗೆಗಳು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

ಪ್ರಮುಖವಾಗಿ, ಸಾರ್ವಜನಿಕರು ಯಾವುದೇ ಮಾಹಿತಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತಲುಪಿಸಲು ಬಯಸಿದಲ್ಲಿ ಮೊಬೈಲ್ ಸಂಖ್ಯೆಯನ್ನು ಕೂಡ ನೀಡಲಾಗಿದೆ. ಮೊಬೈಲ್ ಸಂಖ್ಯೆ 9480805301 ನಂಬರ್ ಗೆ ಕರೆ ಮಾಡಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಗಳನ್ನು ವರದಿ ಮಾಡಬಹುದಾಗಿದೆ