24 September 2026 |

ಕಲ್ಲಡ್ಕ ಪ್ರಭಾಕರ ಭಟ್ ರವರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ!

  • 02 Jun 2025 10:19:25 PM

ಬಂಟ್ವಾಳ, ಕಲ್ಲಡ್ಕ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಸ್ಮರಣಾರ್ಥ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಎರಡು ಕೋಮುಗಳ ನಡುವೆ ದ್ವೇಷವನ್ನು ಉಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

 

ಮೇ 12 ರಂದು ಈ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿದ್ದು, ಜೂನ್ 2 ರಂದು ಕೇಸು ದಾಖಲು ಮಾಡಲಾಗಿತ್ತು. ಈ ಕೇಸಿನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಇವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೃಷ್ಣಕುಮಾರ್ ಅವರಿದ್ದ ಪೀಠವು ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ವಿಚಾರಣೆ ಜೂನ್ 10 ರವರೆಗೆ ಮುಂದೂಡಲಾಗಿದೆ.

 

ದಕ್ಷಿಣ ಕನ್ನಡ ಈಗಾಗಲೇ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರೂಗಳ ಮೇಲೆ ಕಠಿಣ ಕ್ರಮ ಕೈಗೊಳುತ್ತಿದ್ದಾರೆ. ಪ್ರಭಾಕರ್ ಭಟ್ ಜೊತೆ ಇನ್ನಿತರ 15 ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಾಗಿದ್ದು, ಜೊತೆಗೆ ಅರುಣ್ ಕುಮಾರ್ ಪುತ್ತಿಲರವರನ್ನು ಗಡಿಪಾರು ಮಾಡಬೇಕೆಂದು ನೋಟೀಸ್ ಕೂಡ ನೀಡಲಾಗಿದೆ.