ಬೆಂಗಳೂರು : RCB ತಂಡದ ಜಯವನ್ನು ವಿಜೃಂಭಿಸುವ ಸಂದರ್ಭದಲ್ಲಿ ನಡೆದ ಭೀಕರ ದುರಂತ ಇಡೀ ರಾಜ್ಯವನ್ನೇ ದುಃಖದಲ್ಲಿ ಮುಳುಗಿಸಿದೆ. ಈ ದುರಂತದಲ್ಲಿ 11 ಅಭಿಮಾನಿಗಳ ಮರಣವಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಈ ಸಂಬಂಧವಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮೋದಿಯವರು "ಬೆಂಗಳೂರಿನಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಹೃದಯಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಹೇಳಿಕೊಂಡಿದ್ದಾರೆ.