23 June 2026 |

ದ.ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ : ಜೂನ್ 12 ರಿಂದ 14 ರವರೆಗೆ ಭಾರಿ ಮಳೆಯ ಮುನ್ಸೂಚನೆ!

  • 11 Jun 2025 12:30:56 AM

ಮಂಗಳೂರು: ಕೆಳ ದಿನಗಳ ಹಿಂದೆ ಚಂಡಮಾರುತದ ಪ್ರಭಾವದಿಂದ ಭಾರಿ ಮಳೆ ಸುರಿದಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಪ್ರಭಾವದಿಂದ ಗುಡ್ಡೆ ಕುಸಿತ, ಮನೆಯ ಒಳಗೆ ನೀರು ಹಾಗೂ ಇನ್ನಿತರ ಕಾರಣಗಳಿಂದ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿತ್ತು.

 

ಮಳೆ ನಿಂತ ಮೇಲೆ ಸೆಕೆಯ ಪ್ರಭಾವವು ಜಾಸ್ತಿಯಾಗಿತ್ತು. ಇದೀಗ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಪುನಃ ಆರಂಭಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 12 ರಿಂದ 14 ರವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

 

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿರುವ ಕಾರಣ ಹವಾಮಾನ ಇಲಾಖೆ ಈಗಾಗಲೇ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಕರಾವಳಿ ಭಾಗಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಿಡಿಲಿನೊಂದಿಗೆ ಮಳೆಯಾಗಲಿದೆ ಮತ್ತು ಕೆಲವು ಕಡೆ ಗಾಳಿಯಿಂದ ಕೂಡಿದ ರಭಸದ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

 

ಮುನ್ನೆಚರಿಕೆ ಕ್ರಮವಾಗಿ ಸಾರ್ವಜನಿಕರು ಜಾಗರೂಕರಾಗಿರಬೇಕೆಂದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.