23 June 2026 |

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

  • 11 Jun 2025 11:45:47 AM

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಗಾಲಿ ಜನಾರ್ಧನ ರೆಡ್ಡಿಗೆ ರಿಲೀಫ್ ಸಿಕ್ಕಿದೆ. ಗಂಗಾವತಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದೆ. 

 

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಹೈದರಾಬಾದ್ ನಲ್ಲಿರುವ ಸಿಸಿಬಿ ನ್ಯಾಯಾಲಯವು ಮೇ 06 ರಂದು 7 ವರ್ಷದ ಶಿಕ್ಷೆ ವಿಧಿಸಿತ್ತು. ತೀರ್ಪು ಹೊರಬಂದ ಕೂಡಲೇ ಜನಾರ್ಧನ ರೆಡ್ಡಿಯನ್ನು ಬಂಧಿಸಲಾಗಿತ್ತು. 

 

ಆದರೆ ಇದೀಗ ಸಿಸಿಬಿ ನ್ಯಾಯಾಲಯದ ತೀರ್ಪುನ್ನು ತೆಲಂಗಾಣ ಹೈಕೋರ್ಟ್ ತಡೆಹಿಟ್ಟಿದೆ ಮತ್ತು ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.