ಪ್ರಧಾನಿ ನರೇಂದ್ರ ಮೋದಿಗೆ ಟ್ರೆನಿಡಾಡ್ ಮತ್ತು ಟೊಬಾಗೋ ದೇಶದ ಅತ್ಯುನ್ನತ ರಾಷ್ಟ್ರೀಯ ಗೌರವವಾದ 'ದಿ ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರೆನಿಡಾಡ್ ಮತ್ತು ಟೊಬಾಗೋ' ಅನ್ನುವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮೋದಿ ಅವರ ಜಾಗತಿಕ ನಾಯಕತ್ವ, ಭಾರತೀಯ ವಲಸೆಗಾರರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಮತ್ತು ಕೋವಿಡ್ - 19 ಸಾಂಕ್ರಾಮಿಕ ಸಮಯದಲ್ಲಿ ಮಾನವೀಯ ಕೊಡುಗೆಗಳನ್ನು ಗುರುತಿಸಿ ವಿದೇಶಿ ನಾಯಕರೊಬ್ಬರಿಗೆ ಈ ಪ್ರಶಸ್ತಿಯನ್ನು ನೀಡುತ್ತಿರುವುದು ಇದೇ ಮೊದಲು.
ಮೋದಿಯವರು ಪ್ರಧಾನ ಸ್ವೀಕರಿಸಿದ ನಂತರ, 'ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ 'ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ & ಟೊಬಾಗೊ' ವನ್ನು ನೀಡಿ ಗೌರವಿಸಿದ್ದಕ್ಕಾಗಿ ನಾನು ನಿಮಗೆ, ನಿಮ್ಮ ಸರ್ಕಾರಕ್ಕೆ ಮತ್ತು ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ; ಈ ಗೌರವವು ನಮ್ಮ ಎರಡೂ ದೇಶಗಳ ನಡುವಿನ ಶಾಶ್ವತ ಮತ್ತು ಆಳವಾದ ಸ್ನೇಹದ ಸಂಕೇತವಾಗಿದೆ; 140 ಕೋಟಿ ಭಾರತೀಯರ ಪರವಾಗಿ ನಾನು ಈ ಗೌರವವನ್ನು ಹಂಚಿಕೊಂಡು ಹೆಮ್ಮೆಯಾಗಿ ಸ್ವೀಕರಿಸುತ್ತೇನೆ ಎಂದು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.