ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿರುವ ವ್ಯಕ್ತಿಯನ್ನು ಇಂದು ಕೋರ್ಟಿಗೆ ಹಾಜರುಪಡಿಸಲಾಯಿತು.
ಸಂಪೂರ್ಣ ಮುಸುಕುಧಾರಿಯಾಗಿ ಕರೆದುಕೊಂಡು ಬಂದ ವಕೀಲರು, ಜುಲೈ 11 ರಂದು ಬೆಳ್ತಂಗಡಿ ತಾಲೂಕಿನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನೂರಕ್ಕೂ ಹೆಚ್ಚು ಹೆಣಗಳನ್ನು ಹೂತು ಹಾಕಿದ್ದೇನೆಂದು ಹೇಳುವ ಆ ಅಪರಿಚಿತ ವ್ಯಕ್ತಿಯ ವಿಚಾರಣೆ ನಡೆಸುವ ಸಂದರ್ಭದಲ್ಲಿ ವಕೀಲರಿಗೆ ಒಟ್ಟಿಗೆ ಇರಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರೂ, ನ್ಯಾಯಾಲಯ ಆ ಮನವಿಯನ್ನು ತಿರಸ್ಕರಿಸಿದೆ.
ಕರ್ನಾಟಕ ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿದ ಈ ಪ್ರಕರಣ ಯಾವ ತಿರುವನ್ನು ಪಡೆಯಲಿದೆ ಎಂಬುವುದನ್ನು ಕಾದು ನೋಡಬೇಕಾಗಿದೆ