31 January 2026 | Join group

ಕರಾವಳಿಯಲ್ಲಿ ಪ್ರದೇಶದಲ್ಲಿ ಮಳೆ ಸಾಧ್ಯತೆ : ಮಾರ್ಚ್ 17ಕ್ಕೆ ಯಲ್ಲೋ ಅಲರ್ಟ್

  • 17 Mar 2025 10:37:12 AM

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾರ್ಚ್ 17,2025 ಯಲ್ಲೋ ಅಲರ್ಟ್ ಘೋಷಿಸಿದೆ.

 

ಕರಾವಳಿ ಪ್ರದೇಶಗಳಲ್ಲಿ ಮುಂದಿನ ಎರಡು ದಿವಸ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಸೋಮವಾರ ಬೆಳಗಿನಿಂದ ಮೋಡ ಕವಿದ ವಾತಾವರಣವಿದ್ದು,  ದಿನವಿಡೀ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು ಗುಡುಗು ಸಹಿತ ಮಳೆಯಾಗಲಿದೆ.

 

ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ಬಿಸಿಲ ಬೇಗೆ ಕೊಂಚ ಕಡಿಮೆಯಾಗಿತ್ತು. ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.